ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ತರವಾದುದು:ಎಂ. ಪಿ ಮುಲ್ಲ್ಯೆ ಮುಹಿಲನ್
ರಾಮನಗರ ಮೇ 20 (ಕರ್ನಾಟಕ ವಾರ್ತೆ):- ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ತರವಾದುದು ಸಿಕ್ಕಿರುವ ಅವಕಾಶವನ್ನು ಉಪಯೋಗಿಸಿಕೊಂಡು ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳನ್ನು ಬಗೆಹರಿಸಿ ಎಂದು ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ .ಎಂ. ಪಿ ಮುಲ್ಲ್ಯೆ ಮುಹಿಲನ್ ಕರೆ ನೀಡಿದರು.
ರಾಮನಗರ ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ರವರ ಸಹಯೋಗದಲ್ಲಿ 2019ರ ಮೇ 20 ಸೋಮವಾರ ಬೆಳಿಗ್ಗೆ 10ಗಂಟೆಗೆ ಹಮ್ಮಿಕೊಂಡಿದ್ದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಪುನಶ್ಚೇತನ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಜನರಿಗೆ ಅನುಕೂಲವಾಗುವಂತಹ ಕಾರ್ಯಮಾಡುವಂತೆ ಉತ್ತೇಜಿಸಲು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಹಮ್ಮಿಕೊಂಡಿರುವ 2ದಿನದ ಕಾರ್ಯಾಗಾರ ಇದಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು. ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಗಾಂದೀಜಿಯವರ ಕನಸಿಗೆ ಜೀವ ತುಂಬುವಂತಹ ಶಕ್ತಿ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಲ್ಲಿದೆ ಎಂದರು.
ತರಬೇತಿ ಕಾರ್ಯಗಾರದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ಮುಖ್ಯಸ್್ಥ . ಜಿ.ಎಸ್.ಗಣೇಶ್ ಪ್ರಸಾದ್, ಬೋಧಕರುಗಳಾದ
ಜಿ.ಮಲ್ಲಿಕಾರ್ಜುನ ಸ್ವಾಮಿ, ಕೆ.ಆರ್.ಶಂಕರ್, ಗಿರಿಧರ್ ಎಂ.ಎಸ್, ಜಿಲ್ಲೆಯ ಗ್ರಾಮೀಣ ಅಭಿವೃದ್ದಿ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ಆರ್. ನಿರ್ದೇಶಕರಾದ ಎನ್.ಆರ್. ಉಮೇಶ್ ಪ್ರಾಸ್ತಾವಿಕ ನುಡಿಗಳನ್ನು ನುಡಿದರು.

Comments
Post a Comment